ADVERTISEMENT

ಲಾಕ್‌‌ಡೌನ್‌‌ನಲ್ಲಿ ಹುಟ್ಟುಹಬ್ಬ: ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

ಏಜೆನ್ಸೀಸ್
Published 6 ಏಪ್ರಿಲ್ 2020, 4:29 IST
Last Updated 6 ಏಪ್ರಿಲ್ 2020, 4:29 IST
ಬಿಜೆಪಿ ಶಾಸಕ ದಾದಾರಾವ್ ನಿವಾಸದಲ್ಲಿ ನೆರೆದಿರುವ ಜನ
ಬಿಜೆಪಿ ಶಾಸಕ ದಾದಾರಾವ್ ನಿವಾಸದಲ್ಲಿ ನೆರೆದಿರುವ ಜನ   
""

ಮುಂಬೈ : ಲಾಕ್ ಡೌನ್ ನಡುವೆಯೂ ಹುಟ್ಟುಹಬ್ಬ ಆಚರಿಸಿಕೊಂಡು ಜನರನ್ನು ಗುಂಪು ಸೇರಿಸಿದ ಆರೋಪದಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕನ ವಿರುದ್ಧ ಪೊಲೀಸರುಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ವಾರ್ದಾದ ಬಿಜೆಪಿ ಶಾಸಕ ದಾದಾರಾವ್ ಕೆಚೆ ಹುಟ್ಟುಹಬ್ಬ ಆಚರಿಸಿಕೊಂಡವರು. ಭಾನುವಾರ ಸುಮಾರು ನೂರಕ್ಕೂ ಹೆಚ್ಚು ಮಂದಿ ಆರ್ವಿಯಲ್ಲಿರುವ ಇವರ ನಿವಾಸದಲ್ಲಿ ನೆರೆದಿದ್ದರು. ಅಲ್ಲದೆ, ಹುಟ್ಟುಹಬ್ಬದ ಪ್ರಯುಕ್ತದವಸ ಧಾನ್ಯ ನೀಡುತ್ತಾರೆ ಎಂದು ತಿಳಿದ ಜನರು ಇವರ ನಿವಾಸದ ಕಡೆ ಧಾವಿಸಿದ್ದಾರೆ. ಆದರೆ, ಅಲ್ಲಿ ಯಾವುದೇ ದವಸ ಧಾನ್ಯ ನೀಡುತ್ತಿರಲಿಲ್ಲ ಎನ್ನಲಾಗಿದೆ.

ಶಾಸಕ ದಾದಾರಾವ್ ಕೆಚೆ

ಈ ಸಂಬಂಧ ವಿಷಯ ತಿಳಿದ ಪೊಲೀಸರು ನಿವಾಸಕ್ಕೆ ಆಗಮಿಸಿನೆರೆದಿದ್ದ ಜನರನ್ನು ಚದುರಿಸಿದ್ದಾರೆ. ಆದರೂ ಶಾಸಕರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಇದರಿಂದಾಗಿ ಶಾಸಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ದಾದರಾವ್ , ನಾನು ನಾಲ್ಕು ದಿನಗಳ ಹಿಂದೆಯೇ ಜನರಲ್ಲಿ ಬೇಡಿಕೊಂಡಿದ್ದೆ. ನನ್ನ ಮನೆ ಬಳಿ ಬರುವುದು ಬೇಡ, ಹುಟ್ಟುಹಬ್ಬದ ವೇಳೆ ಶುಭ ಹಾರೈಸುವುದು ಬೇಡ ಎಂದು ತಿಳಿಸಿದ್ದೆ. ಯಾರೋ ಕಿಡಿಗೇಡಿಗಳು ನನ್ನ ವಿರುದ್ಧ ಪಿತೂರಿ ನಡೆಸಿ ದವಸ ಧಾನ್ಯ ಕೊಡುತ್ತಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ನಾನು ಯಾರಿಗೂ ಕಾಲ್ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.