ADVERTISEMENT

ಜಾರ್ಖಂಡ್‌| ಕಾಲ್ತುಳಿತಕ್ಕೆ ಒಳಗಾಗಿ ಶಿಶು ಸಾವು: ಪೊಲೀಸರ ವಿರುದ್ಧ FIR ದಾಖಲು

ಪಿಟಿಐ
Published 23 ಮಾರ್ಚ್ 2023, 6:49 IST
Last Updated 23 ಮಾರ್ಚ್ 2023, 6:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಚಿ: ಆರೋಪಿಗಳ ಹುಡುಕಾಟದ ವೇಳೆ ಪೊಲೀಸರು ನಡೆಸಿದ ದಾಳಿಯಲ್ಲಿ ನಾಲ್ಕು ದಿನದ ಶಿಶು ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ನಡೆದಿದೆ.

ಈ ಪ್ರಕರಣ ಸಂಬಂಧ ಆರು ಮಂದಿ ಪೋಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಲ್ಲಿ ಐವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ನ್ಯಾಯಾಲಯ ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು. ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಅವರ ಮನೆ ಮೇಲೆ ದಾಳಿ ನಡೆಸಿದ್ದರು.

ADVERTISEMENT

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ನಾಲ್ಕು ದಿನದ ಶಿಶುವು ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದೆ ಎಂದು ಉಲ್ಲೇಖಿಸಿಲಾಗಿದೆ.

‘ಗಿರಿದಿಹ್‌ನ ಡಿಯೋರಿ ಪೊಲೀಸ್ ಠಾಣೆಯ ಇಬ್ಬರು ಅಧಿಕಾರಿಗಳಾದ ಸಂಗಮ್ ಪಾಠಕ್ ಮತ್ತು ಎಸ್‌.ಕೆ ಮಂಡಲ್ ಸೇರಿದಂತೆ ಆರು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರಲ್ಲಿ ಐವರನ್ನು ಅಮಾನತುಗೊಳಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಬಾಬುಲಾಲ್ ಮರಾಂಡಿ ಅವರು 'ಹೇಯ' ಕೃತ್ಯ ಎಂದು ಕರೆದಿದ್ದು, ಈ ಸಂಬಂಧ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.