ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ಹನುಮ ಜಯಂತಿಯ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಘಟನೆಗೆ ಸಂಬಂಧಿಸಿದಂತೆ ನಾವು ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ತನಿಖೆ ಕೈಗೊಳ್ಳಲಾಗಿದೆ, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ' ಎಂದು ಕಾನೂನು ಮತ್ತು ಸುವ್ಯವಸ್ಥೆಯ ವಿಶೇಷ ಪೊಲೀಸ್ ಕಮಿಷನರ್ ದೀಪೇಂದ್ರ ಪಥಾಕ್ ಸುದ್ದಿಸಂಸ್ಥೆ ಐಎಎನ್ಎಸ್‌ಗೆ ತಿಳಿಸಿದ್ದಾರೆ.
ಹನುಮ ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ಶೋಭಾ ಯಾತ್ರೆಯಲ್ಲಿ ಶನಿವಾರ ಸಂಜೆ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ನಡೆದ ಕಲ್ಲುತೂರಾಟದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು. ಉದ್ರಿಕ್ತರು ಹಲವು ವಾಹನಗಳಿಗೆ ಬೆಂಕಿ ಹಚ್ಚಿದ್ದರು.
ಘಟನೆ ನಡೆದ ಸ್ಥಳಕ್ಕೆ ಕೂಡಲೇ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅನ್ನು ಒದಗಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.