ADVERTISEMENT

ಜನಾಂಗೀಯ ಘರ್ಷಣೆಯಲ್ಲಿ ಮೃತರಾದವರಿಗೆ ಗುಂಡು ಹಾರಿಸಿ ಗೌರವ: ಎಫ್‌ಐಆರ್ ದಾಖಲು

ಪಿಟಿಐ
Published 4 ಮೇ 2025, 15:28 IST
Last Updated 4 ಮೇ 2025, 15:28 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಇಂಫಾಲ್: ಮಣಿಪುರದಲ್ಲಿ ಜನಾಂಗೀಯ ಘರ್ಷಣೆಯ ವೇಳೆ ಮೃತಪಟ್ಟಿದ್ದವರ ಗೌರವಾರ್ಥ ಈಚೆಗೆ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ನೀಡಲಾದ ‘ಗೌರವ ವಂದನೆ’ ಸಂಬಂಧ ಎಫ್‌ಐಆರ್‌ ದಾಖಲಾಗಿದೆ.

ಜನಾಂಗೀಯ ಘರ್ಷಣೆ ಆರಂಭವಾಗಿ ಎರಡು ವರ್ಷವಾದ ನಿಮಿತ್ತ ಸೈಕುಲ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಗೌರವ ವಂದನೆ ಸಲ್ಲಿಸಲಾಗಿತ್ತು. ಅಧಿಕಾರಿಗಳು ಇಲ್ಲಿ ಐದು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಕುಕಿ ಸಮುದಾಯದ ಪ್ರಾಬಲ್ಯವುಳ್ಳ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ನಡೆದಿದ್ದ ಗೌರವ ವಂದನೆ ಕಾರ್ಯಕ್ರಮದಲ್ಲಿ ಸೇನಾ ಸಿಬ್ಬಂದಿಯೂ ಭಾಗವಹಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ಮುಖಂಡರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ‌ಅಧಿಕಾರಿಗಳು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.