ADVERTISEMENT

ಬ್ರಿಜ್‌ಭೂಷಣ್‌ ವಿರುದ್ಧ ಎರಡು ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2023, 2:54 IST
Last Updated 29 ಏಪ್ರಿಲ್ 2023, 2:54 IST
ಕುಸ್ತಿಪಟುಗಳ ಪ್ರತಿಭಟನೆ
ಕುಸ್ತಿಪಟುಗಳ ಪ್ರತಿಭಟನೆ   

ನವದೆಹಲಿ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಎರಡು ಎಫ್‌ಐಆರ್‌ ದಾಖಲಿಸಿದ್ದಾರೆ. 

ಬ್ರಿಜ್‌ಭೂಷಣ್ ಮೇಲೆ ಪೋಕ್ಸೊ ಕಾಯಿದೆಯಲ್ಲಿ ಒಂದು ಹಾಗೂ ಮಹಿಳೆಯರ ಘನತೆಗೆ ಧಕ್ಕೆ ಮಾಡಿರುವ ಆರೋಪದಲ್ಲಿ ಎರಡನೇ ಎಫ್‌ಐಆರ್ ದಾಖಲು ಮಾಡಲಾಗಿದೆ. 

‘ಬ್ರಿ‌ಜ್‌ಭೂಷಣ್‌ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗುವುದು’ ಎಂದು ದೆಹಲಿ ಪೊಲೀಸರನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿ ಪಿ.ಎಸ್‌.ನರಸಿಂಹ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ ಪೀಠಕ್ಕೆ ತಿಳಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.