ADVERTISEMENT

ಮುಂಬೈ: 20 ಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ, 7 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜನವರಿ 2022, 6:48 IST
Last Updated 22 ಜನವರಿ 2022, 6:48 IST
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)   

ಮುಂಬೈ: ದಕ್ಷಿಣ ಮುಂಬೈಯ ಗ್ರ್ಯಾಂಟ್ ರಸ್ತೆಯ ನಾನಾ ಚೌಕದ 20 ಮಹಡಿ ಕಟ್ಟಡವೊಂದರಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 17 ಜನ ಗಾಯಗೊಂಡಿದ್ದಾರೆ.

18ನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 7:28ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯನ್ನು ನಿಯಂತ್ರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಗಾಯಾಳುಗಳನ್ನು ಸಮೀಪದ ಭಾಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. 12 ಮಂದಿಯ ಆರೋಗ್ಯ ಸ್ಥಿರವಾಗಿದೆ. ಮೂವರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಲ್ವರು ಗಾಯಾಳುಗಳನ್ನು ನಾಯರ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಸಾವಿಗೀಡಾಗಿದ್ದರು.

ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಸ್ಥಳಕ್ಕೆ ಹಾಗೂ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.