ADVERTISEMENT

ಪ್ರಧಾನಿ ಮೋದಿ ನಿವಾಸದ ಬಳಿ ಅಗ್ನಿ ಅವಘಡ

ಬೆಂಕಿ ನಿಯಂತ್ರಣದಲ್ಲಿದೆ ಎಂದು ಪ್ರಧಾನಿ ಕಚೇರಿ ಟ್ವೀಟ್

ಏಜೆನ್ಸೀಸ್
Published 30 ಡಿಸೆಂಬರ್ 2019, 15:20 IST
Last Updated 30 ಡಿಸೆಂಬರ್ 2019, 15:20 IST
ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸ (ಪಿಟಿಐ ಸಂಗ್ರಹ ಚಿತ್ರ)
ಲೋಕ ಕಲ್ಯಾಣ್ ಮಾರ್ಗದಲ್ಲಿರುವ ಪ್ರಧಾನಿ ನಿವಾಸ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ:ಇಲ್ಲಿನ ಲೋಕ ಕಲ್ಯಾಣ್ ಮಾರ್ಗದಲ್ಲಿರುವಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಬಳಿ ರಾತ್ರಿ 7.30ರ ಸುಮಾರಿಗೆ ಅಗ್ನಿ ಆಕಸ್ಮಿಕ ಸಂಭವಿಸಿದೆ.

ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಿಯಂತ್ರಿಸಿವೆ.ಅಧಿಕಾರಿಗಳು ಹೇಳಿರುವ ಪ್ರಕಾರ ಇದೊಂದು ಸಣ್ಣ ಅವಘಡವಷ್ಟೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಈ ಮಧ್ಯೆ, ಪ್ರಧಾನಿ ಕಚೇರಿ ಈ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದು, ‘ಶಾರ್ಟ್‌ ಸರ್ಕಿಟ್‌ನಿಂದಾಗಿ ಲೋಕ ಕಲ್ಯಾಣ್‌ ಮಾರ್ಗದಲ್ಲಿ ಬೆಂಕಿ ಹೊತ್ತಿಕೊಂಡಿದೆ.ಪ್ರಧಾನಿಯವರ ನಿವಾಸ ಅಥವಾ ಕಚೇರಿ ಪ್ರದೇಶದಲ್ಲಿ ಅವಘಡ ಉಂಟಾಗಿಲ್ಲ. ಎಸ್‌ಪಿಜಿ ರಿಸೆಪ್ಷನ್‌ ಪ್ರದೇಶದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ನಿಯಂತ್ರಣದಲ್ಲಿದೆ’ ಎಂದು ಉಲ್ಲೇಖಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.