ಬೆಂಕಿ ಅವಘಡ
(ಸಾಂಕೇತಿಕ ಚಿತ್ರ)
ಗ್ವಾಲಿಯರ್ (ಮಧ್ಯ ಪ್ರದೇಶ): ವಿದ್ಯುತ್ ಅವಘಡದಿಂದಾಗಿ ಜಮೀನುಗಳಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಗಾಯಗೊಂಡಿದ್ದು, ಹಲವಾರು ಮನೆಗಳು ಸುಟ್ಟುಹೋಗಿವೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಗ್ವಾಲಿಯರ್ ಜಿಲ್ಲೆಯ ಭಿತರ್‌ವಾರ್ ಮತ್ತು ಚಿನೋರ್ ತಹಸಿಲ್ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಭೌರಿ, ರರೌವಾ, ಚಿನೋರ್ ಮತ್ತು ಗಾಂಧಿ ಗ್ರಾಮಗಳಿಗೆ ಬೆಂಕಿ ಹರಡಿದೆ ಎಂದು ಭಿತರ್‌ವಾರ್‌ನ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಂಜೀವ್ ಜೈನ್ ತಿಳಿಸಿದ್ದಾರೆ.
ಹಲವಾರು ಮನೆಗಳು ಸುಟ್ಟುಹೋಗಿವೆ, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳು ಗ್ವಾಲಿಯರ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೆಲವು ಜಾನುವಾರುಗಳಿಗೂ ಸುಟ್ಟ ಸುಟ್ಟ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
ಬಿರುಗಾಳಿಯಿಂದಾಗಿ ವಿದ್ಯುತ್ ಅವಘಡ ಉಂಟಾಗಿದ್ದು, ಹೊಲಗಳಲ್ಲಿ ಬೆಂಕಿ ಕಾಣಿಸಿಕೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಹರಡಿತು ಎಂದು ಭಿತರ್‌ವಾರ್‌ನ ಬಿಜೆಪಿ ಶಾಸಕ ಮೋಹನ್ ಸಿಂಗ್ ರಾಥೋಡ್ ಹೇಳಿದ್ದಾರೆ.
ಕುಟುಂಬಗಳಿಗೆ ಆಹಾರವನ್ನು ವ್ಯವಸ್ಥೆ ಮಾಡಿದೆ. ಅವರಿಗೆ ಪರಿಹಾರ ಮತ್ತು ಇತರ ಸಹಾಯವನ್ನು ನೀಡಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ.
ಗಾಯಗೊಂಡ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಪಶುವೈದ್ಯರ ತಂಡವೂ ಗ್ರಾಮಗಳಿಗೆ ತಲುಪಿದೆ. ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಕೂಡ ಶನಿವಾರ ರಾತ್ರಿ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿವಿಧ ಇಲಾಖೆಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.