ಮುಂಬೈ: ಮಹಾರಾಷ್ಟ್ರದ ಭಂಡಾರ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ದುರಂತದಲ್ಲಿ 10 ನವಜಾತ ಶಿಶುಗಳು ಮೃತಪಟ್ಟಿವೆ. ಇದರಲ್ಲಿ ಮೂರು ಶಿಶುಗಳು ಸುಟ್ಟ ಗಾಯ ಮತ್ತು ಏಳು ಮಕ್ಕಳು ಹೊಗೆಯಿಂದಾಗಿ ಉಸಿರುಗಟ್ಟಿ ಸಾವಿಗೀಡಾಗಿವೆ. ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರು ತಿಳಿಸಿದರು.
ಮೃತಪಟ್ಟ ಮಗುವಿನ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಹೇಳಿದರು.
‘ಶುಕ್ರವಾರ ಮಧ್ಯರಾತ್ರಿಯ ಬಳಿಕ 1.30ರ ಸುಮಾರಿಗೆ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಲ್ಲಿದ್ದ 17 ಮಕ್ಕಳಲ್ಲಿ ಏಳು ಶಿಶುಗಳನ್ನು ಆಸ್ಪತ್ರೆ ಸಿಬ್ಬಂದಿ ರಕ್ಷಿಸಿದ್ದಾರೆ. ಈ ಅವಘಡಕ್ಕೆ ಕಾರಣರಾದವರನ್ನು ಪತ್ತೆ ಹಚ್ಚುತ್ತೇವೆ. ಈಗಾಗಲೇ ತನಿಖೆಗಾಗಿ ಆದೇಶಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಗಮನವಿಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.