ವಸತಿ ಸಮುಚ್ಛಯದಲ್ಲಿ ಬೆಂಕಿ
ಮುಂಬೈ: ಇಲ್ಲಿನ 15 ಮಹಡಿಗಳ ವಸತಿ ಕಟ್ಟಡದಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಂದ್ರಾ (ಪಶ್ಚಿಮ) ಪ್ರದೇಶದಲ್ಲಿರುವ ಫಾರ್ಚೂನ್ ಎನ್‌ಕ್ಲೇವ್ ಕಟ್ಟಡದ ಆರನೇ ಮಹಡಿಯ ಫ್ಲಾಟ್‌ನಲ್ಲಿ ಬೆಳಿಗ್ಗೆ 1ಗಂಟೆಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಕರೆ ಬಂದಿತ್ತು. ನಾಲ್ಕು ಅಗ್ನಿಶಾಮಕ ವಾಹನಗಳ ಜೊತೆ ಸ್ಥಳಕ್ಕೆ ತೆರಳಿದ ನಾವು, ಸುಮಾರು ಎರಡು ಗಂಟೆಗಳ ತೀವ್ರ ಪ್ರಯತ್ನದ ನಂತರ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಘಟನೆಯಲ್ಲಿ 80 ವರ್ಷದ ವೃದ್ಧೆ ಸಿರಾ ಪಾರ್ಯಾನಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಿಂದ ಒಂಬತ್ತು ಜನರನ್ನು ಮೆಟ್ಟಿಲುಗಳನ್ನು ಬಳಸಿ ರಕ್ಷಣೆ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಹೇಳಿದರು.
ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು ಬೆಂಕಿಯ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.