ADVERTISEMENT

ಗುಜರಾತ್‌: ಕೋವಿಡ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ತಪ್ಪಿದ ಅಪಾಯ

ಏಜೆನ್ಸೀಸ್
Published 12 ಆಗಸ್ಟ್ 2020, 11:35 IST
Last Updated 12 ಆಗಸ್ಟ್ 2020, 11:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೊಡೆಲಿ: ಗುಜರಾತ್‌ನಚೋಟಾ ಉದಯಪುರ ಜಿಲ್ಲೆಯ ಬೊಡೆಲಿ ಪಟ್ಟಣದಲ್ಲಿ ಎರಡು ಅಂತಸ್ತಿನ ಆಸ್ಪತ್ರೆಯ ಕೋವಿಡ್‌–19 ವಾರ್ಡ್‌ನಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದೆ.

ಅದೃಷ್ಟವಶಾತ್‌ ಈ ದುರಂತದಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಈ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 10 ಸೋಂಕಿತರನ್ನು ಕೂಡಲೇ ಆಸ್ಪತ್ರೆಯ ಕೆಳಮಹಡಿಗೆ ಸ್ಥಳಾಂತರಿಸಲಾಯಿತು. ಅವರಲ್ಲಿ ಕೆಲವರನ್ನು ಇತರ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಆಸ್ಪತ್ರೆಯ ಅಧಿಕಾರಿ ಹೇಳಿದ್ದಾರೆ.

ಶಾರ್ಟ್ ಸರ್ಕಿಟ್‌ನಿಂದಾಗಿ ವಾರ್ಡ್‌ನ ಸ್ವಿಚ್‌ ಬೋರ್ಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ಆಸ್ಪತ್ರೆಯ ಸಿಬ್ಬಂದಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ಮುಖ್ಯ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮಹೇಶ್‌ ಚೌಧರಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.