ADVERTISEMENT

ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: 20 ನವಜಾತ ಶಿಶುಗಳ ರಕ್ಷಣೆ

ಪಿಟಿಐ
Published 9 ಜೂನ್ 2023, 14:28 IST
Last Updated 9 ಜೂನ್ 2023, 14:28 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ (ಪಿಟಿಐ): ಇಲ್ಲಿಯ ಜನಕಪುರಿ ಪ್ರದೇಶದ ನೆಸ್ಟ್‌ ನ್ಯೂ ಬಾರ್ನ್‌ ಆ್ಯಂಡ್‌ ಚೈಲ್ಡ್‌ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, 20 ನವಜಾತ ಶಿಶುಗಳನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಮಾಹಿತಿ ಬಂದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ನೆಲ ಮಹಡಿಯಲ್ಲಿ ಉಂಟಾದ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಉಪ ಪೊಲೀಸ್‌ ಆಯುಕ್ತ ಎಂ. ಹರ್ಷವರ್ಧನ್‌ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT