ADVERTISEMENT

ಮುಂಬೈಯಲ್ಲಿ ಭಾರಿ ಅಗ್ನಿ ದುರಂತ: ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಸೆಪ್ಟೆಂಬರ್ 2021, 1:31 IST
Last Updated 17 ಸೆಪ್ಟೆಂಬರ್ 2021, 1:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಹಾರಾಷ್ಟ್ರ: ಮುಂಬೈಯ ಮನ್‌ಖುರ್ದ್ ಪ್ರದೇಶದಲ್ಲಿರುವ ಗುಜರಿ ಅಂಗಡಿಯೊಂದರಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡು ಅಪಾರ ಹಾನಿಯಾಗಿದೆ.

ಸದ್ಯ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಆರು ಅಗ್ನಿಶಾಮಕ ವಾಹನಗಳನ್ನು ಬಳಸಿಕೊಂಡು ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಸೆ. 11ರಂದು ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸಾರ್ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಪೇಂಟ್ ಮತ್ತು ರಾಸಾಯನಿಕಗಳನ್ನು ತಯಾರಿಸುವ ಕಾರ್ಖಾನೆಯು ಸಂಪೂರ್ಣವಾಗಿ ಸುಟ್ಟುಹೋಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.