ADVERTISEMENT

ಗುಜರಾತ್ | ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ: ಪ್ರಾಣಹಾನಿ ಇಲ್ಲ

ಏಜೆನ್ಸೀಸ್
Published 9 ಡಿಸೆಂಬರ್ 2020, 1:34 IST
Last Updated 9 ಡಿಸೆಂಬರ್ 2020, 1:34 IST
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ
ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ   

ಅಹಮದಾಬಾದ್‌: ಇಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇಲ್ಲಿನ ವತ್ವಾ ಪ್ರದೇಶದಲ್ಲಿ ಈ ದುರಂತ ನಡೆದಿದೆ. ಸ್ಥಳಕ್ಕೆ ಆಗಮಿಸಿದ 20ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ ಎಂದು ಮೂಲಗಳು ತಿಳಿಸಿವೆ.

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. ಅವಘಡಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಕಳೆದ ಭಾನುವಾರ ಇಲ್ಲಿನ ಬಗಾಪುರದಲ್ಲಿ ಬೆಂಕಿ ದುರಂತ ಸಂಭವಿಸಿ 20ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.