ADVERTISEMENT

ತಮಿಳುನಾಡು: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ  

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಏಪ್ರಿಲ್ 2022, 6:51 IST
Last Updated 27 ಏಪ್ರಿಲ್ 2022, 6:51 IST
ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯ  (ಎಎನ್‌ಐ ಟ್ವಿಟರ್‌ ಚಿತ್ರ)
ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿರುವ ದೃಶ್ಯ (ಎಎನ್‌ಐ ಟ್ವಿಟರ್‌ ಚಿತ್ರ)   

ಚೆನ್ನೈ: ನಗರದ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಕಾಣಿಸಿಕೊಂಡ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

‘ಹಳೆಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿನ ಎಲ್ಲಾ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಸಾವು- ನೋವುಗಳು ವರದಿಯಾಗಿಲ್ಲ’ ಎಂದು ತಮಿಳುನಾಡು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಜೆ ರಾಧಾಕೃಷ್ಣನ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.