ನವದೆಹಲಿ: ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿರುವ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದೂ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅಗ್ನಿಶಾಮಕ ದಳದ ಅಧಿಕಾರಿಗಳು,ನರೆಲಾ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.ಮೂವರನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಕಾರ್ಖಾನೆಯಲ್ಲಿ ಸಿಲುಕಿರುವ ಸಾಧ್ಯತೆ ಇದೆ. ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.