ADVERTISEMENT

ಪೂರ್ವ ದೆಹಲಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಪಿಟಿಐ
Published 4 ಜೂನ್ 2022, 16:19 IST
Last Updated 4 ಜೂನ್ 2022, 16:19 IST
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ – ಐಸ್ಟಾಕ್)   

ನವದೆಹಲಿ: ಪೂರ್ವ ದೆಹಲಿಯ ಪುಷ್ಪಾಂಜಲಿ ಎನ್‌ಕ್ಲೇವ್ ಪ್ರದೇಶದ ಜೈನ್ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾವು–ನೋವು ಸಂಭವಿಸಿರುವ ಬಗ್ಗೆ ಈವರೆಗೆ ಮಾಹಿತಿ ದೊರೆತಿಲ್ಲ ಎಂದು ಅವರು ಹೇಳಿದ್ದಾರೆ.

ಸಂಜೆ 4.44ರ ವೇಳೆಗೆ ಬೆಂಕಿಹೊತ್ತಿಕೊಂಡ ಬಗ್ಗೆ ಮಾಹಿತಿ ದೊರೆತಿದೆ. ಐದು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೈನ್ ಆಸ್ಪತ್ರೆಯ ಎರಡನೇ ಮಹಡಿಯ ಹವಾ ನಿಯಂತ್ರಣ ಘಟಕದಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.