ADVERTISEMENT

ಕೋಲ್ಕತ್ತ ಕಾಳಿಘಾಟ್‌ ಪ್ರದೇಶದಲ್ಲಿ ಅಗ್ನಿ ಅನಾಹುತ: ವೃದ್ಧೆ ಸಾವು

ಪಿಟಿಐ
Published 12 ನವೆಂಬರ್ 2020, 9:04 IST
Last Updated 12 ನವೆಂಬರ್ 2020, 9:04 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲ್ಕತ್ತ: ಇಲ್ಲಿನ ಕಾಳಿಘಾಟ್‌ ಪ್ರದೇಶದಲ್ಲಿನ ಎರಡು ಅಂತಸ್ತಿನ ಕಟ್ಟಡದಲ್ಲಿ ಗುರುವಾರ ನಸುಕಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ವೃದ್ಧೆಯೊಬ್ಬರು ಸಾವಿಗೀಡಾಗಿದ್ದಾರೆ. ಮತ್ತೊಬ್ಬ ವ್ಯಕ್ತಿಗೆ ಗಾಯಗಳಾಗಿವೆ.

ಬೆಂಕಿ ಹೊತ್ತಿಕೊಂಡಿದ್ದಕ್ಕೆ ಕಾರಣ ತಿಳಿದು ಬಂದಿಲ್ಲ ಅಗ್ನಿಶಾಮಕ ದಳದ ನಾಲ್ಕು ವಾಹನಗಳು ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದವು. ಸುಮಾರು ಎರಡು ಗಂಟೆ ಅವಧಿವರೆಗೆ ಕಾರ್ಯಾಚರಣೆ ನಡೆಯಿತು.

ಗಾಯಗೊಂಡಿದ್ದ ವೃದ್ಧೆ ಮತ್ತು ಪುರುಷನೊಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃದ್ಧೆ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.