
ನವದೆಹಲಿ: ದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಮಾರ್ಗ್‌ನಲ್ಲಿರುವ ಬಿಜೆಪಿಯ ಹಿರಿಯ ಸಂಸದ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ದೆಹಲಿಯ ಅಗ್ನಿಶಾಮಕ ಸೇವೆಯ(ಡಿಎಫ್‌ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಅವಘಡದ ಸಂದರ್ಭದಲ್ಲಿ ಸಂಸದರು ಮನೆಯಲ್ಲಿ ಇದ್ದರೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.
ಬೆಳಿಗ್ಗೆ 8.05ರ ಸುಮಾರಿಗೆ ಪ್ರಸಾದ್ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಡಿಎಫ್‌ಎಸ್ ಕೇಂದ್ರಕ್ಕೆ ಕರೆ ಬಂದಿತ್ತು. ಮನೆಯ ಕೊಠಡಿಯೊಂದರಲ್ಲಿ ಇರಿಸಲಾಗಿದ್ದ ಪೀಠೋಪಕರಣಗಳಿಗೆ ಬೆಂಕಿ ಹೊತ್ತಿಕೊಂಡಿತ್ತು ಎಂದು ಅಧಿಕಾರಿ ಹೇಳಿದ್ದಾರೆ.
ಸ್ಥಳಕ್ಕೆ ತೆರಳಿದ ಮೂರು ಅಗ್ನಿಶಾಮಕ ವಾಹನಗಳು ಬೆಳಿಗ್ಗೆ 8.35ರ ಸುಮಾರಿಗೆ ಬೆಂಕಿ ನಂದಿಸಿದವು. ಯಾರಿಗೂ ಗಾಯಗಳಾಗಿಲ್ಲ. ಅಗ್ನಿ ಅವಘಡದ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ಅವರು ಹೇಳಿದ್ದಾರೆ.
ದೆಹಲಿ ಪೊಲೀಸರ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸಹ ಸ್ಥಳಕ್ಕೆ ತೆರಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.