ADVERTISEMENT

ಕಾನ್ಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ; ಪ್ರಾಣ ಹಾನಿ ಇಲ್ಲ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 5:54 IST
Last Updated 28 ಮಾರ್ಚ್ 2021, 5:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಾನ್ಪುರ: ‘ಇಲ್ಲಿನ ಸರ್ಕಾರಿ ಆಸ್ಪತ್ರೆಯೊಂದರ ಹೃದ್ರೋಗ ವಿಭಾಗದಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದೆ. ಆದರೆ ಯಾವುದೇ ಸಾವು–ನೋವು ವರದಿಯಾಗಿಲ್ಲ’ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

‘ಈ ಘಟನೆಯಿಂದಾಗಿ ಆಸ್ಪತ್ರೆಯ ಹಲವು ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಅವರಿಗೆ ತಕ್ಷಣವೇ ಚಿಕಿತ್ಸೆ ಒದಗಿಸಲಾಗುವುದು. ಈ ಘಟನೆಯ ಬಗ್ಗೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ’ ಎಂದು ಸರ್ಕಾರಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಧಾನ ಕಾರ್ಯದರ್ಶಿ, ಆರೋಗ್ಯ ಶಿಕ್ಷಣ ಮತ್ತು ಅಗ್ನಿಶಾಮಕ ಇಲಾಖೆಯ ಮಹಾನಿರ್ದೇಶಕರನ್ನೊಳಗೊಂಡ ಉನ್ನತ ಮಟ್ಟದ ತಂಡಕ್ಕೆ ಘಟನಾ ಸ್ಥಳದ ಪರಿಶೀಲನೆ ನಡೆಸಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೂಚನೆ ನೀಡಿದ್ದಾರೆ. ಈ ತಂಡದಲ್ಲಿ ಕಾನ್ಪುರದ ವಿಭಾಗೀಯ ಆಯುಕ್ತರೂ ಕೂಡ ಇರಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.