ಅಗ್ನಿ ಅವಘಡ
(ಸಾಂದರ್ಭಿಕ ಚಿತ್ರ)
ಜಮ್ಮು: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ ಮೊಗಸಾಲೆಯಲ್ಲಿ ಬುಧವಾರ ಅಗ್ನಿ ಅವಘಡ ಕಾಣಿಸಿಕೊಂಡಿದ್ದು, ಕೆಲವು ಹಳೆಯ ಛಾಯಾಚಿತ್ರಗಳು ಮತ್ತು ಪೀಠೋಪಕರಣಗಳು ಸುಟ್ಟುಹೋಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಿಗ್ಗೆ 9.34ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಅದನ್ನು ನಂದಿಸಲಾಯಿತು. ಎರಡು ಅಂತಸ್ತಿನ ವಿಧಾನಸಭೆಯ ಮೊಗಸಾಲೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.