ADVERTISEMENT

ಮುಂಬೈ | ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 4:58 IST
Last Updated 8 ಫೆಬ್ರುವರಿ 2020, 4:58 IST
   

ಮುಂಬೈ:ನವಿ ಮುಂಬೈನ ಸೀವುಡ್ಸ್‌ ಡರೇವ್‌ನಲ್ಲಿರುವ 21 ಅಂತಸ್ತಿನ ಕಟ್ಟಡವೊಂದರ ಮೇಲಿನ ಎರಡು ಮಹಡಿಗಳಲ್ಲಿ ಶನಿವಾರ ಬೆಳಗ್ಗೆ ಅಗ್ನಿ ದುರಂತ ಸಂಭವಿಸಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಇಲ್ಲಿನ ಪಾಲಂ ಬೀಚ್‌ನ 36ನೇ ವಲಯದ ಬಳಿ ಇರುವ ಸೀ ಹೋಮ್ಸ್‌ ಅಪಾರ್ಟ್‌ಮೆಂಟ್‌ನಲ್ಲಿ ಬೆಳಗ್ಗೆ 6.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ. ಆರು ಅಗ್ನಿಶಾಮಕ ವಾಹನಗಳನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ.

‘ಯಾವುದೇ ಪ್ರಾಣಾಪಾಯವಿಲ್ಲ. ಆದರೆ, ಬೆಂಕಿ ಹಾರಿಸುವ ಕಾರ್ಯ ಇನ್ನೂ ಮುಂದುವರಿದಿದೆ’ ಎಂದು ನೆರುಲ್‌ ಫೈರ್ ಬ್ರಿಗೇಡ್‌ ಅಧಿಕಾರಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.