ಬೆಂಕಿ ಅವಘಡ
ನವದೆಹಲಿ: ಭಾನುವಾರ ಬೆಳಗ್ಗೆ ಪೂರ್ವ ದೆಹಲಿಯ ಕೃಷ್ಣ ನಗರ ಪ್ರದೇಶದ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ಮೂವರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ 13 ಜನರನ್ನು ರಕ್ಷಣೆ ಮಾಡಲಾಗಿದೆ.
ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಲ್ಲಿಂದ ಕರೆ ಬಂದಿತ್ತು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದರು ಎಂದು ಅವರು ಹೇಳಿದ್ದಾರೆ.
ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.