ADVERTISEMENT

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ

ಪಿಟಿಐ
Published 28 ಜೂನ್ 2021, 5:22 IST
Last Updated 28 ಜೂನ್ 2021, 5:22 IST
ಸಾಂದರ್ಭಿಕ ಚಿತ್ರ (ಡೆಕ್ಕನ್ ಹೆರಾಲ್ಡ್ ಸಂಗ್ರಹ ಚಿತ್ರ)
ಸಾಂದರ್ಭಿಕ ಚಿತ್ರ (ಡೆಕ್ಕನ್ ಹೆರಾಲ್ಡ್ ಸಂಗ್ರಹ ಚಿತ್ರ)   

ನವದೆಹಲಿ: ಇಲ್ಲಿನ ಏಮ್ಸ್ (ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯ ಸಮೀಪದ ಕೋಣೆಯಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿರುವುದಾಗಿ ದೆಹಲಿ ಅಗ್ನಿಶಾಮಕ ದಳ ತಿಳಿಸಿದೆ. ಅದೃಷ್ಟವಶಾತ್ ಯಾರೂ ಗಾಯಗೊಂಡಿಲ್ಲ.

ಮುಂಜಾನೆ 5.04ಕ್ಕೆ ಏಮ್ಸ್‌ನ ಶ್ತ್ರಚಿಕಿತ್ಸಾ ಕೊಠಡಿಯ ಬಳಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿರುವುದಾಗಿ ದೂರವಾಣಿ ಕರೆ ಬಂದಿದೆ. ತಕ್ಷಣವೇ ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.

‘ಬೆಳಿಗ್ಗೆ 5.15ಕ್ಕೆ ಹಾಜ್‌ಖಾಸ್ ಪೊಲೀಸ್ ಠಾಣೆಗೆ ಕರೆ ಬಂದಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸುತ್ತಮುತ್ತಲಿನ ಕೊಠಡಿಗಳಲ್ಲಿದ್ದ ಎಲ್ಲ ರೋಗಿಗಳನ್ನು ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕದ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ’ ಎಂದು ದೆಹಲಿ ದಕ್ಷಿಣ ಡಿಸಿಪಿ ಅತುಲ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.