ADVERTISEMENT

ಸಿಕಂದರಾಬಾದ್-ಅಗರ್ತಲಾ ರೈಲಿನಲ್ಲಿ ಬೆಂಕಿ ಅವಘಡ: ಯಾವುದೇ ಅನಾಹುತ ಸಂಭವಿಸಿಲ್ಲ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜೂನ್ 2023, 10:49 IST
Last Updated 6 ಜೂನ್ 2023, 10:49 IST
ರೈಲು (ಸಂಗ್ರಹ ಚಿತ್ರ)
ರೈಲು (ಸಂಗ್ರಹ ಚಿತ್ರ)   

ಭುವನೇಶ್ವರ: ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾದ ಬೆರ್ಹಾಂಪುರ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ರೈಲ್ವೆ ಪೊಲೀಸರು ಪ್ರಯಾಣಿಕರನ್ನು ಇಳಿಸಿದ್ದಾರೆ. ತಕ್ಷಣಕ್ಕೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. 45 ನಿಮಿಷಗಳ ಬಳಿಕ ರೈಲು ನಿಲ್ದಾಣದಿಂದ ಹೊರಟಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ರೈಲಿನ ಬಿ-5 ಎಸಿ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. 

ADVERTISEMENT

ಕಳೆದ ನಾಲ್ಕು ದಿನಗಳ ಹಿಂದೆ ಒಡಿಶಾದಲ್ಲಿ ಸಂಭವಿಸಿದ ಮೂರು ರೈಲುಗಳ ಅಪಘಾತದಲ್ಲಿ 278 ಜನರು ಮೃತಪಟ್ಟು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.