ನವದೆಹಲಿ: ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಎಐಐಎಂಎಸ್-ಏಮ್ಸ್) 9ನೇ ಮಹಡಿಯಲ್ಲಿ ಬುಧವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ.
22 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದವು. ಈ ಮಹಡಿಯಲ್ಲಿದ್ದವರನ್ನು ಕೂಡಲೇ ಸ್ಥಳಾಂತರಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಹೇಳಿದ್ದಾರೆ.
ಈ ಮಹಡಿಯಲ್ಲಿ ಪ್ರಯೋಗಾಲಯಗಳು ಹಾಗೂ ವಿವಿಧ ಪರೀಕ್ಷಾ ವಿಭಾಗಗಳಿವೆ. ಇಲ್ಲಿ ರೋಗಿಗಳನ್ನು ದಾಖಲಿಸಿರಲಿಲ್ಲ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆದಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.