ನವದೆಹಲಿ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನದ (ಬೋಯಿಂಗ್777) ಆಕ್ಸಿಲರಿ ಪವರ್ ಯುನಿಟ್‌ನಲ್ಲಿ ಬುಧವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಈ ಘಟಣೆ ನಡೆದಿದ್ದು, ಪ್ರಯಾಣಿಕರು ಇಲ್ಲದ ಸಮಯದಲ್ಲಿ ಎಸಿ ರಿಪೇರಿ ಕಾರ್ಯ ನಡೆಸುವಾಗ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಬೆಂಕಿ ನಂದಿಸಲಾಗಿದೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ‘ಇದೊಂದು ಸಣ್ಣ ಪ್ರಮಾಣದ ಪ್ರಕರಣ’ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.