ADVERTISEMENT

ಚೆನ್ನೈ: ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ, 150ಕ್ಕಿಂತಲೂ ಹೆಚ್ಚು ಕಾರುಗಳು ಭಸ್ಮ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2019, 13:21 IST
Last Updated 24 ಫೆಬ್ರುವರಿ 2019, 13:21 IST
ವಿಡಿಯೊ ದೃಶ್ಯ
ವಿಡಿಯೊ ದೃಶ್ಯ   

ಚೆನ್ನೈ: ಚೆನ್ನೈ ಹೊರವಲಯದಶ್ರೀ ರಾಮಚಂದ್ರ ಮೆಡಿಕಲ್ ಕಾಲೇಜು ಬಳಿಯಿರುವ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು 150ಕ್ಕಿಂತಲೂ ಹೆಚ್ಚುಕಾರುಗಳು ಭಸ್ಮವಾಗಿವೆ.

ಭಾನುವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಒಣಹುಲ್ಲಿಗೆ ಬೆಂಕಿ ಹತ್ತಿಕೊಂಡಿತ್ತು.ಅಗ್ನಿಶಾಮಕ ದಳದ ಹತ್ತು ವಾಹನಗಳು ಬಂದು ಬೆಂಕಿ ನಂದಿಸಿವೆ.

ಖಾಸಗಿ ಕಾರು ಕಂಪನಿಯೊಂದು ಕಳೆದ ಒಂದು ವರ್ಷದಿಂದ ಇಲ್ಲಿ ಕಾರುಗಳನ್ನು ನಿಲ್ಲಿಸಿತ್ತು. ಇಲ್ಲಿ ಕೆಲವು ಹೊಸ ಕಾರುಗಳೂ ಇದ್ದವು.ಬೆಂಕಿ ಸಂಪೂರ್ಣ ನಂದಿದ್ದು, ಇನ್ನೂ ಹೊಗೆ ಬರುತ್ತಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಯೊಬ್ಬರು ಎನ್‌ಡಿಟಿವಿಗೆ ಹೇಳಿದ್ದಾರೆ.ಈ ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ.

ADVERTISEMENT

ಶನಿವಾರ ಬೆಂಗಳೂರಿನ ಯಲಹಂಕದ ವಾಯುನೆಲೆಯ ಪಾರ್ಕಿಂಗ್ ಪ್ರದೇಶದಲ್ಲಿ ಬೆಂಕಿ ಅನಾಹುತ ಸಂಭವಿಸಿ 300 ಕಾರುಗಳು ಸುಟ್ಟುಹೋದ ಘಟನಯ ಬೆನ್ನಲ್ಲೇ ಚೆನ್ನೈನಲ್ಲಿ ಈ ಅನಾಹುತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.