ADVERTISEMENT

ದೆಹಲಿಯ ಚಾಂದ್ನಿ ಚೌಕ್ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2022, 4:25 IST
Last Updated 25 ನವೆಂಬರ್ 2022, 4:25 IST
ದೆಹಲಿಯ ಚಾಂದ್ನಿ ಚೌಕ್ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ
ದೆಹಲಿಯ ಚಾಂದ್ನಿ ಚೌಕ್ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ   

ದೆಹಲಿ: ಉತ್ತರ ದೆಹಲಿಯ ಚಾಂದ್ನಿ ಚೌಕ್‌ನ ಭಾಗೀರಥ್ ಪ್ಯಾಲೇಸ್ ಪ್ರದೇಶದಲ್ಲಿರುವ ಹೋಲ್‌ಸೇಲ್ ಮಾರ್ಕೆಟ್‌ನಲ್ಲಿ ಗುರುವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸಪಡುತ್ತಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ 'ಎಎನ್ಐ' ಟ್ವೀಟ್ ಮಾಡಿದೆ.

ಈವರೆಗೆ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ. 30ರಷ್ಟು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಶುಕ್ರವಾರ ಬೆಳಿಗ್ಗೆಯೂ ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ.

ADVERTISEMENT

ಪ್ರಾಥಮಿಕ ಮಾಹಿತಿ ಪ್ರಕಾರ, ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಮಾರುಕಟ್ಟೆಯ ಇತರೆ ಅಂಗಡಿಗಳಿಗೂವ್ಯಾಪಿಸಿದೆ ಎನ್ನಲಾಗಿದೆ.

ಇಲ್ಲಿಯವರೆಗೆ ಬೆಂಕಿ ಹತೋಟಿಗೆ ಬಂದಿಲ್ಲ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದಾರೆ. ಬೆಂಕಿ ಅವಘಡದ ಹಿಂದಿನ ಕಾರಣ ತಿಳಿದು ಬಂದಿಲ್ಲ ಎಂದು ಮಾಜಿ ಆರೋಗ್ಯ ಸಚಿವ ಡಾ. ಹರ್ಷವರ್ಧನ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.