ಸಾಂದರ್ಭಿಕ ಚಿತ್ರ
ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮನೆಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ರಾತ್ರಿ ಹಳೆ ಬಾರಾಮುಲ್ಲಾ ಪಟ್ಟಣದ ಜಲಾಲ್ ಸಾಹಿಬ್ ವಸತಿ ಪ್ರದೇಶದಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ಮನೆಗಳಿಗೆ ಹರಡಿತು ಎಂದು ಅವರು ಹೇಳಿದ್ದಾರೆ.
ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರು, ಪೊಲೀಸರು ಮತ್ತು ಸೇನಾ ಸಿಬ್ಬಂದಿಗಳ ಸಹಾಯದಿಂದ ಬೆಂಕಿ ನಿಯಂತ್ರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ತಂಡದ ಕಾರ್ಯಾಚರಣೆ ವೇಳೆ ವ್ಯಕ್ತಿಯೊಬ್ಬರಿಗೆ ಗಾಯಗಳಾಗಿವೆ. ಅವಘಡಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ. ಘಟನೆಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.