ADVERTISEMENT

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

ಪಿಟಿಐ
Published 15 ಡಿಸೆಂಬರ್ 2022, 9:06 IST
Last Updated 15 ಡಿಸೆಂಬರ್ 2022, 9:06 IST
ಚಿತ್ರ ಕೃಪೆ (Twitter/@MBTheGuide)
ಚಿತ್ರ ಕೃಪೆ (Twitter/@MBTheGuide)   

ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಬಹುಮಹಡಿ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಮುಂಬೈಯ ಕರ್ರೆ ರೋಡ್ ಪ್ರದೇಶದಲ್ಲಿರುವ ಕಟ್ಟಡದ 14ನೇ ಮಹಡಿಯ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಇದುವರೆಗೆ ಯಾವುದೇ ಸಾವು-ನೋವು ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಗುರುವಾರ ಬೆಳಿಗ್ಗೆ ಸುಮಾರು 11ರ ಹೊತ್ತಿಗೆ ಒನ್ ಅವಿಘ್ನ ಪಾರ್ಕ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

2021ರ ಅಕ್ಟೋಬರ್‌ನಲ್ಲಿ ಇದೇ ವಸತಿ ಸಂಕೀರ್ಣದ 19ನೇ ಮಹಡಿಯಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಇತರರನ್ನು ರಕ್ಷಿಸುತ್ತಿದ್ದಾಗ ಸೆಕ್ಯೂರಿಟಿ ಗಾರ್ಡ್ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.