ADVERTISEMENT

ಪಿಒಕೆಯ ಅರಣ್ಯದಲ್ಲಿ ಬೆಂಕಿ: ಗಡಿಯಲ್ಲಿ ಭದ್ರತಾ ಪಡೆಗಳಿಂದ ಕಟ್ಟೆಚ್ಚರ

ಪಿಟಿಐ
Published 6 ಜನವರಿ 2024, 8:31 IST
Last Updated 6 ಜನವರಿ 2024, 8:31 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಶ್ರೀನಗರ: ಪಾಕ್‌ ಆಕ್ರಮಿತ ಕಾಶ್ಮೀರದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಭಾರತದ ಭಾಗಕ್ಕೂ ವ್ಯಾಪಿಸಿದೆ. ಬೆಂಕಿಯ ನೆಪದಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನಗಳನ್ನು ತಡೆಯಲು ಭದ್ರತಾ ಪಡೆಗಳು ಸಜ್ಜಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ತಡರಾತ್ರಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಬೆಂಕಿ ಕಾಣಿಸಿಕೊಂಡಿದ್ದು, ಮೆಂಧರ್‌ ಉಪವಿಭಾಗದ ಬಾಲಾಕೋಟ್‌ ಭಾಗಕ್ಕೂ ಹರಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಅರಣ್ಯ ಪ್ರದೇಶಕ್ಕೂ ಬೆಂಕಿ ವ್ಯಾಪಿಸಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಬೆಂಕಿಯ ನೆಪದಲ್ಲಿ ಉಗ್ರರು ಒಳನುಸುಳುವ ಸಾಧ್ಯತೆಗಳಿದ್ದು, ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಎಚ್ಚರಿಕೆಯನ್ನು ವಹಿಸಲಾಗಿದೆ. ಎಲ್‌ಒಸಿಯಲ್ಲಿ ಕಾವಲು ಕಾಯುತ್ತಿರುವ ಸೇನಾ ಪಡೆಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.