ADVERTISEMENT

ಮುಂಬೈ: ಮಹಾನಗರ ಟೆಲಿಫೋನ್‌ ನಿಗಮದ ಕಟ್ಟಡದಲ್ಲಿ ಬೆಂಕಿ ಅವಘಡ

​ಪ್ರಜಾವಾಣಿ ವಾರ್ತೆ
Published 22 ಜುಲೈ 2019, 11:29 IST
Last Updated 22 ಜುಲೈ 2019, 11:29 IST
   

ಮುಂಬೈ (ಮಹಾರಾಷ್ಟ್ರ): ಇಲ್ಲಿನಬಾಂದ್ರದಲ್ಲಿನನಾಲ್ಕು ಅಂತಸ್ತಿನಮಹಾನಗರ ಟೆಲಿಫೋನ್‌ ನಿಗಮದ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಮಧ್ಯಾಹ್ನ 3 ಗಂಟೆಗೆ ಈ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ.

ಬೆಂಕಿ ಕಾಣಿಸಿಕೊಂಡಿರುವ ಮಹಡಿಯಲ್ಲಿ ಸುಮಾರು 100 ಮಂದಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಸುಮಾರು 14 ಅಗ್ನಿಶಾಮಕ ವಾಹನಗಳು ಬೆಂಕಿ ಆರಿಸುತ್ತಿದ್ದು, ಇಲ್ಲಿಯವರೆಗೆ ಯಾವುದೇ ಅನಾಹುತ ಸಂಭವಿಸಲ್ಲ ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.