ಸ್ಫೋಟ
(ಐಸ್ಟೋಕ್ ಚಿತ್ರ)
ಲಖನೌ: ಇಲ್ಲಿನ ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ನಡೆಯುತ್ತಿದ್ದ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
‘ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಚಾವಣಿ ಕುಸಿದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಎಸಿಪಿ ಅನಿಂಧ್ಯಾ ವಿಕ್ರಂ ಸಿಂಗ್ ಹೇಳಿದ್ದಾರೆ.
‘ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡುವುದು ಮೊದಲ ಆದ್ಯತೆ. ಅದರ ಬೆನ್ನಲ್ಲೇ ಘಟನೆಗೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಯಲಿದೆ’ ಎಂದು ಜಿಲ್ಲಾಧಿಕಾರಿ ವಿಶಾಖ್ ಜಿ. ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.