ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಅರೀಕೋಡ್ ಬಳಿ ಕ್ರೀಡಾಂಗಣದಲ್ಲಿ ನಡೆದ ಫುಟ್ಬಾಲ್ ಪಂದ್ಯದ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈದಾನದಲ್ಲಿ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಪಟಾಕಿ ಸಿಡಿಸಿದ್ದಾರೆ. ಪರಿಣಾಮ ಪಟಾಕಿ ಕಿಡಿ ಮೈದಾನದಲ್ಲಿ ಹರಡಿ, ಪಂದ್ಯ ವೀಕ್ಷಿಸಲು ಕುಳಿತಿದ್ದ ಜನರ ಮೇಲೆ ಹಾರಿದೆ. ಇದರಿಂದ ಹಲವರು ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಾಕಿ ಸಿಡಿದ ದೃಶ್ಯಗಳ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.