ಪಟ್ನಾ: ಬಿಹಾರದ ಮುಂಗೆರ್‌ನಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ಸಂದರ್ಭ ಗಲಭೆ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ದುರ್ಗಾ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಕೆಲವು ಸಮಾಜಘಾತುಕರು ಕಲ್ಲು ತೂರಾಟ ಮಾಡಿದ್ದು, 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ಇದಾದ ಬಳಿಕ ಗುಂಪಿನಲ್ಲಿದ್ದವರು ಯಾರೋ ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಮುಂಗೆರ್‌ನ ಎಸ್‌ಪಿ ಲಿಪಿ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.
ಇದಕ್ಕೆ ಪ್ರತಿಯಾಗಿ ಕೆಲವರು ಟ್ವೀಟ್ ಮಾಡಿದ್ದು, ಪೊಲೀಸರೇ ಹಲ್ಲೆ ನಡೆಸುತ್ತಿರುವ ವಿಡಿಯೊಗಳನ್ನು ಪೋಸ್ಟ್ ಮಾಡಿದ್ದಾರೆ. ವಿಡಿಯೊದ ಸತ್ಯಾಸತ್ಯತೆ ಕುರಿತು ಅಧಿಕೃತ ಮೂಲಗಳು ಇನ್ನೂ ದೃಢಪಡಿಸಿಲ್ಲ.
ಈ ಮಧ್ಯೆ, ಮುಂಗೆರ್‌ನಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಪೊಲೀಸ್ ಗುಂಡೇಟಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಕೆಲವು ಸುದ್ದಿವಾಹಿನಿಗಳು ವರದಿ ಮಾಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.