ADVERTISEMENT

ಈ ರೀತಿಯ ಘಟನೆಗಳನ್ನು ಸಹಿಸುವುದಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 14:22 IST
Last Updated 30 ಜನವರಿ 2020, 14:22 IST
ಅಮಿತ್ ಶಾ
ಅಮಿತ್ ಶಾ   

ನವದೆಹಲಿ:ದೆಹಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಬಳಿ ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ಪ್ರತಿಭಟನಕಾರರ ಮೇಲೆ ವ್ಯಕ್ತಿಯೊಬ್ಬಗುರುವಾರ ಗುಂಡು ಹಾರಿಸಿದ್ದಾನೆ. ಈತ ಅಪ್ರಾಪ್ತನೆಂದು ಹೇಳಲಾಗುತ್ತಿದೆ.

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ನಾನು ದೆಹಲಿ ಪೊಲೀಸ್ ಆಯುಕ್ತರಲ್ಲಿ ಮಾತನಾಡಿದ್ದೇನೆ. ಈ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲುಅವರಿಗೆ ಆದೇಶಿಸಿದ್ದೇನೆ. ಕೇಂದ್ರ ಸರ್ಕಾರ ಇಂಥಾ ಘಟನೆಗಳನ್ನುಸಹಿಸುವುದಿಲ್ಲ. ಇದನ್ನು ನಾವು ಗಂಭೀರವಾಗಿಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

ಅಮಿತ್ ಶಾ ಟ್ವೀಟ್‌ನ್ನು ರೀಟ್ವೀಟ್ ಮಾಡಿ ಪ್ರತಿಕ್ರಿಯಿಸಿದದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್,ದೆಹಲಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದಾರೆ.

ADVERTISEMENT

ದೆಹಲಿಯಲ್ಲಿ ಏನಾಗುತ್ತಿದೆ? ಕಾನೂನು ವ್ಯವಸ್ಥೆ ಹದಗೆಡುತ್ತಿದೆ. ದಯವಿಟ್ಟು ದೆಹಲಿಯ ಕಾನೂನು ವ್ಯವಸ್ಥೆಯನ್ನು ನಿಭಾಯಿಸಿಎಂದು ಕೇಜ್ರಿವಾಲ್ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.