ADVERTISEMENT

ಬಾಲಿವುಡ್‌ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ

ಪಿಟಿಐ
Published 13 ಸೆಪ್ಟೆಂಬರ್ 2025, 0:41 IST
Last Updated 13 ಸೆಪ್ಟೆಂಬರ್ 2025, 0:41 IST
   

ಬರೇಲಿ (ಉತ್ತರ ಪ್ರದೇಶ): ಬಾಲಿವುಡ್‌ ನಟಿ ದಿಶಾ ಪಟಾನಿ ಅವರ ಪೂರ್ವಜರ ಮನೆಯ ಹೊರಗೆ ಶುಕ್ರವಾರ ತಡರಾತ್ರಿ ಗುಂಡಿನ ದಾಳಿ ನಡೆದಿದೆ. ಬರೇಲಿಯಲ್ಲಿ ನಡೆದ ಈ ದಾಳಿಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ ಹೊತ್ತುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

‘ದಿಶಾ ಮತ್ತು ಆಕೆಯ ಸಹೋದರಿ ಈಚೆಗೆ ಧಾರ್ಮಿಕ ಮುಖಂಡರಾದ ಸಂತ ಪ್ರೇಮಾನಂದ ಮಹಾರಾಜ್ ಮತ್ತು ಅನಿರುದ್ಧಾಚಾರ್ಯ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಪ್ರತಿಭಟನೆಯಾಗಿ ಈ ದಾಳಿ ನಡೆಸಲಾಗಿದೆ ಎಂದು ಬ್ರಾರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ಸಿ.ಸಿ.ಟಿ.ವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪ್ರಕರಣವನ್ನು ಕ್ರೈಂ ಬ್ರಾಂಚ್‌ ವಿಭಾಗಕ್ಕೆ ವರ್ಗಾಯಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.