ADVERTISEMENT

ಅಮೃತ ಕಾಲದ ಮೊದಲ ಬಜೆಟ್ ಅಭಿವೃದ್ಧಿ ಹೊಂದಿದ ಭಾರತಕ್ಕೆ ಬುನಾದಿ: ಮೋದಿ

ಪಿಟಿಐ
Published 1 ಫೆಬ್ರುವರಿ 2023, 10:29 IST
Last Updated 1 ಫೆಬ್ರುವರಿ 2023, 10:29 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ನವೆದಹಲಿ: ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಈಡೇರಿಸಲು ಅಮೃತ ಕಾಲದ ಮೊದಲ ಬಜೆಟ್ ಬುನಾದಿಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಸಂಸತ್ತಿನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಬುಧವಾರ) 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದರು.

ಬಜೆಟ್ ಕುರಿತು ಸಮಗ್ರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: ಕೇಂದ್ರ ಬಜೆಟ್ 2023

ADVERTISEMENT

ಇದಕ್ಕೆ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಅಪಾರ ಆಕಾಂಕ್ಷೆ ಹೊಂದಿರುವ ಸಮಾಜ, ಕೃಷಿಕರು ಮತ್ತು ಮಧ್ಯಮ ವರ್ಗದ ಜನರ ಕನಸುಗಳನ್ನು ಸಾಕಾರಗೊಳಿಸಲಿದೆ ಎಂದು ಹೇಳಿದರು.

ದೇಶದ ಮಧ್ಯಮ ವರ್ಗವು ಸಮೃದ್ಧ ಹಾಗೂ ಅಭಿವೃದ್ಧಿ ಹೊಂದಿದ ಭಾರತದ ಕನಸುಗಳನ್ನು ನನಸಾಗಿಸುವ ಶಕ್ತಿಯಾಗಿದೆ. ಅದನ್ನು ಸಾಕಾರಗೊಳಿಸಲು ನಮ್ಮ ಸರ್ಕಾರವು ಹಲವು ನಿರ್ಣಯಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಸಮಾಜದ ವಿವಿಧ ಇಲಾಖೆಗಳನ್ನು ಬಜೆಟ್ ತಲುಪಿದೆ. ಡಿಜಿಟಲ್ ಪಾವತಿಯ ಯಶಸ್ಸನ್ನು ಕೃಷಿ ವಲಯದಲ್ಲಿ ಪುನರಾವರ್ತಿಸಬೇಕು. ಅದಕ್ಕಾಗಿ ಡಿಜಿಟಲ್ ಮೂಲಸೌಕರ್ಯಗಳನ್ನು ಹಾಕುವ ಯೋಜನೆ ತರಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.