ADVERTISEMENT

ಕೇರಳದಲ್ಲೂ ಓಮೈಕ್ರಾನ್‌ ಸೋಂಕು ಪ್ರಕರಣ ಪತ್ತೆ

ಪಿಟಿಐ
Published 12 ಡಿಸೆಂಬರ್ 2021, 14:31 IST
Last Updated 12 ಡಿಸೆಂಬರ್ 2021, 14:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ತಿರುವನಂತಪುರ: ಕೇರಳದಲ್ಲಿ ಕೋವಿಡ್‌–19 ರೂಪಾಂತರಿ ಓಮೈಕ್ರಾನ್‌ನ ಮೊದಲ ಸೋಂಕು ಪ್ರಕರಣ ದೃಢವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಭಾನುವಾರ ತಿಳಿಸಿದ್ದಾರೆ.

ತಮ್ಮ ಫೇಸ್‌ಬುಕ್ ಪುಟದಲ್ಲಿ ಭಾನುವಾರ ವಿಡಿಯೊ ಪ್ರಕಟಿಸಿರುವ ಅವರು, ಓಮೈಕ್ರಾನ್‌ ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಸೋಂಕಿತ ವ್ಯಕ್ತಿ ಇತ್ತೀಚೆಗೆ ಬ್ರಿಟನ್‌ನಿಂದ ಕೇರಳಕ್ಕೆ ಬಂದಿದ್ದರು. ಅವರ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ. ವೈರಸ್‌ನ ಹೊಸ ರೂಪಾಂತರದ ಹರಡುವಿಕೆಯನ್ನು ತಡೆಯಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಹೀಗಾಗಿ ಯಾರೂ ಭಯಪಡುವ ಅಗತ್ಯವಿಲ್ಲ,’ ಎಂದು ಅವರು ಹೇಳಿದರು.

ADVERTISEMENT

ಇದಕ್ಕೂ ಮುನ್ನ, ಆಂಧ್ರ ಪ್ರದೇಶ, ಚಂಢೀಗಡ ಮತ್ತು ಕರ್ನಾಟಕದಲ್ಲೂ ಇಂದು ತಲಾ ಒಂದೊಂದುಓಮೈಕ್ರಾನ್‌ ಪ್ರಕರಣಗಳು ಪತ್ತೆಯಾದವು. ಇದರೊಂದಿಗೆ ದೇಶದ ಒಟ್ಟು ಓಮೈಕ್ರಾನ್‌ ಪ್ರಕರಣಗಳ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.