ADVERTISEMENT

ದೆಹಲಿಗೂ ದಾಳಿ ಮಾಡಿದ ಓಮೈಕ್ರಾನ್: 1 ಪ್ರಕರಣ ಪತ್ತೆ, 15 ಜನ ನಿಗಾದಲ್ಲಿ

ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2021, 6:39 IST
Last Updated 5 ಡಿಸೆಂಬರ್ 2021, 6:39 IST
ದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ್ ಆಸ್ಪತ್ರೆಯಲ್ಲಿ ಭಾನುವಾರ ಕಂಡು ಬಂದ ದೃಶ್ಯ– ಚಿತ್ರ–ಪಿಟಿಐ
ದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ್ ಆಸ್ಪತ್ರೆಯಲ್ಲಿ ಭಾನುವಾರ ಕಂಡು ಬಂದ ದೃಶ್ಯ– ಚಿತ್ರ–ಪಿಟಿಐ   

ನವದೆಹಲಿ: ಕೊರೊನಾವೈರಸ್‌ನ ರೂಪಾಂತರಿ ತಳಿಯಾಗಿ ಎಲ್ಲೆಡೆ ಆತಂಕ ಸೃಷ್ಟಿಸಿರುವ ಓಮೈಕ್ರಾನ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪತ್ತೆಯಾಗಿದೆ.

‘ತಾಂಜಾನಿಯಾದಿಂದ ಮರಳಿ ಬಂದ ವ್ಯಕ್ತಿಯೊಬ್ಬರಲ್ಲಿ ಓಮೈಕ್ರಾನ್ ಪತ್ತೆಯಾಗಿದೆ. ಅವರನ್ನು ದೆಹಲಿಯ ಲೋಕನಾಯಕ ಜಯಪ್ರಕಾಶ ನಾರಾಯಣ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾದಲ್ಲಿರಿಸಲಾಗಿದೆ’ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ತಿಳಿಸಿದ್ದಾರೆ.

‘ಇದರ ಜೊತೆಗೆ 15 ಕೋವಿಡ್ ಪೀಡಿತರನ್ನು ಓಮೈಕ್ರಾನ್ ಶಂಕೆಯ ಮೇಲೆ ಇದೇ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಜೈನ್ ತಿಳಿಸಿದ್ದಾರೆ.

ADVERTISEMENT

ಇದರೊಂದಿಗೆ 5 ಓಮೈಕ್ರಾನ್‌ ಪ್ರಕರಣಗಳು ಭಾರತದಲ್ಲಿ ಪತ್ತೆಯಾದಂತಾಗಿದೆ. ಕರ್ನಾಟಕದಲ್ಲಿ 2, ಗುಜರಾತ್‌ನಲ್ಲಿ 1 ಹಾಗೂ ಮಹಾರಾಷ್ಟ್ರದಲ್ಲಿ 1 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.