ADVERTISEMENT

ಕೇರಳ ಚುನಾವಣೆ: ಸ್ಪರ್ಧೆಯಿಂದ ಹಿಂದೆ ಸರಿದ ಮೊದಲ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2021, 1:48 IST
Last Updated 4 ಏಪ್ರಿಲ್ 2021, 1:48 IST
ಮೊದಲ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿ ಅನನ್ಯ ಕುಮಾರಿ ಅಲೆಕ್ಸ್
ಮೊದಲ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿ ಅನನ್ಯ ಕುಮಾರಿ ಅಲೆಕ್ಸ್   

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಡೆಮಾಕ್ರಟಿಕ್ ಸೋಶಿಯಲ್ ಜಸ್ಟೀಸ್ ಪಕ್ಷದಿಂದ ಸ್ಪರ್ಧಿಸಲು ಬಯಸಿದ್ದ ಮೊದಲ ಲೈಂಗಿಕ ಅಲ್ಪಸಂಖ್ಯಾತ ಅಭ್ಯರ್ಥಿ ಅನನ್ಯ ಕುಮಾರಿ ಅಲೆಕ್ಸ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.

ತಮ್ಮದೇ ಪಕ್ಷದಲ್ಲಿ ಕೆಲವರು ಲಿಂಗ ತಾರತಮ್ಯ ಮಾಡುತ್ತಿದ್ದಾರೆ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ, ಹೀಗಾಗಿ ಚುನಾವಣೆಯಿಂದ ದೂರ ಇರುವುದಾಗಿ ಅವರು ತಿಳಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ವೆಂಗಾರ ವಿಧಾನಸಭಾ ಕ್ಷೇತ್ರದಿಂದ ಅಲೆಕ್ಸ್ ಸ್ಪರ್ಧಿಸಲು ಬಯಸಿದ್ದರು. ಕಿರುಕುಳ ನೀಡಿದ ಡಿಎಸ್‌ಜೆಪಿ ಪಕ್ಷ ಮತ್ತು ನಾಯಕರ ವಿರುದ್ದ ಪೊಲೀಸರಿಗೆ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ.

ADVERTISEMENT

ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತಿಲ್ಲ, ಪಕ್ಷದಲ್ಲಿ ನನಗೆ ಕಿರಿಕಿರಿಯುಂಟಾಗುತ್ತಿದೆ, ಅಲ್ಲದೆ ಲೈಂಗಿಕ ಕಿರುಕುಳವನ್ನೂ ನೀಡಲಾಗುತ್ತಿದೆ. ನನ್ನನ್ನು ಮುಂದಿಟ್ಟುಕೊಂಡು ಅವರು ಪ್ರಚಾರ ಪಡೆಯಲು ಯತ್ನಿಸುತ್ತಿದ್ದಾರೆ. ಚುನಾವಣೆಗೆ ನನ್ನನ್ನು ಸ್ಪರ್ಧಿಸಲು ಹೇಳಿರುವುದಕ್ಕೆ ಅವರಿಗೆ ಬೇರೆಯೇ ಕಾರಣಗಳಿದ್ದವು ಎಂದು ಎಎನ್ಐಗೆ ಅಲೆಕ್ಸ್ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.