ಕಮರಿಗೆ ಉರುಳಿದ ಸೇನಾ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿರುವುದು
–ಪಿಟಿಐ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಯೋಧರು ಮೃತಪಟ್ಟಿದ್ದಾರೆ. ಇತರ ಐವರು ಯೋಧರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ಯೋಧನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆದಿದೆ.
ನೀಲಂ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ಈ ವಾಹನ ಬರುತ್ತಿತ್ತು, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸೇನೆ ಹಾಗೂ ಪೊಲೀಸರ ತಂಡವು ರಕ್ಷಣೆಗೆ ದಾವಿಸಿದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.