ಬಂಧನ
(ಸಾಂದರ್ಭಿಕ ಚಿತ್ರ)
ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಅಕ್ರಮವಾಗಿ ಭಾರತ ಪ್ರವೇಶಿಸಿ ನೆಲೆಸಿದ್ದ ಐವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನಕಲಿ ಉದ್ಯೋಗ ಪ್ರಮಾಣಪತ್ರ ಮತ್ತು ಗುರುತಿನ ಚೀಟಿಯನ್ನು ಪಡೆದು ಸೊನರ್‌ಪುರ್ ಪ್ರದೇಶದಲ್ಲಿ ಐವರು ವಾಸಿಸುತ್ತಿದ್ದರು. ಅಕ್ಕಪಕ್ಕದವರೊಂದಿಗೆ ಸಂವಹನ ನಡೆಸುತ್ತಿರಲಿಲ್ಲ. ಇದರಿಂದ ಅನುಮಾನಗೊಂಡು ಅವರ ಮೇಲೆ ಕಣ್ಣಿಡಲಾಗಿತ್ತು. ಅವರ ಗುರುತು ನಕಲಿ ಎಂದು ತಿಳಿದ ಬಳಿಕ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಒಂದು ವರ್ಷದ ಹಿಂದೆ ಈ ಐವರು ಅಕ್ರವಾಗಿ ಭಾರತವನ್ನು ಪ್ರವೇಶಿಸಿದ್ದಾರೆ. ತಮ್ಮ ನಿಜವಾದ ಗುರುತನ್ನು ಮರೆಮಾಚಿ ಬಟ್ಟೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ನೆರೆಹೊರೆಯವರಿಂದ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಪೊಲೀಸರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.