ಮುಂಬೈ: ಮಹಾರಾಷ್ಟ್ರದ ಸರ್ಕಾರಿ ಅಧಿಕಾರಿ ಮತ್ತು ನೌಕರರು ಇನ್ನುಮುಂದೆ ವಾರಕ್ಕೆ ಐದೇ ದಿನ ಕೆಲಸ ಮಾಡಿದರೆ ಸಾಕು. ಅವರಿಗೆ ಫೆಬ್ರುವರಿ 29ರ ಬಳಿಕ ಅನ್ವಯವಾಗುವಂತೆ ವಾರಾಂತ್ಯದ ರಜೆ ದೊರಕಲಿದೆ.
‘ಸರ್ಕಾರಿ ಉದ್ಯೋಗಿಗಳು ವಾರದಲ್ಲಿ ಐದು ದಿನ ಮಾತ್ರ ಕರ್ತವ್ಯ ನಿರ್ವಹಿಸಬೇಕು’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಸರ್ಕಾರಿ, ಅರೆ–ಸರ್ಕಾರಿ, ಸ್ಥಳೀಯ ಆಡಳಿತದಲ್ಲಿ 20 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದು, ಇವರೆಲ್ಲರಿಗೂ ಈ ನೂತನ ನಿಯಮ ಅನ್ವಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.