ADVERTISEMENT

ಮಣಿಪುರ: ಜೆಡಿಯುನ ಐವರು ಶಾಸಕರು ಬಿಜೆಪಿ ಸೇರ್ಪಡೆ

ಪಿಟಿಐ
Published 3 ಸೆಪ್ಟೆಂಬರ್ 2022, 1:29 IST
Last Updated 3 ಸೆಪ್ಟೆಂಬರ್ 2022, 1:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಂಫಾಲ, ಮಣಿಪುರ: ಜೆಡಿಯುನ ಐವರು ಶಾಸಕರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಈ ಕುರಿತು ಮಣಿಪುರ ವಿಧಾನಸಭೆಯ ಕಾರ್ಯದರ್ಶಿ ಕೆ.ಮೇಘಜಿತ್‌ ಸಿಂಗ್‌ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಐವರು ಜೆಡಿಯು ಶಾಸಕರು ಬಿಜೆಪಿ ಸೇರ್ಪಡೆಯಾಗಿದ್ದನ್ನು ಸ್ಪೀಕರ್‌ ಅವರು ಅನುಮೋದಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಕಳೆದ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜೆಡಿಯು, ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.