ಮುಂಬೈ: ಇಲ್ಲಿನ ಪುಣೆ ಎಕ್ಸ್ಪ್ರೆಸ್ವೇನಲ್ಲಿ ಗುರುವಾರ ರಾತ್ರಿ ಸಂಭವಿಸಿದ ಕಾರು–ಟ್ರಕ್ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, 4 ಮಂದಿ ಗಾಯಗೊಂಡಿದ್ದಾರೆ.
ರಾಯಘಡ ಜಿಲ್ಲೆಯ ಖೋಪೋಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ 9 ಮಂದಿಯಲ್ಲಿ 4 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವಾಗ ಅಸು ನೀಗಿದ್ದಾರೆ. ಕಾರು ಪುಣೆಯಿಂದ ಮುಂಬೈನತ್ತ ಚಲಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.
ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತ 5 ಮಂದಿ ಪುರುಷರು. ಗಾಯಗೊಂಡ ನಾಲ್ವರು ಮಹಿಳೆಯರು. ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.