ADVERTISEMENT

ಮಿಜೋರಾಂ: ಕಣಿವೆಗೆ ಉರುಳಿದ ಪಿಕಪ್ ಟ್ರಕ್–5 ಸಾವು

ಪಿಟಿಐ
Published 22 ನವೆಂಬರ್ 2021, 11:25 IST
Last Updated 22 ನವೆಂಬರ್ 2021, 11:25 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಐಜ್ವಾಲ್: ಪಿಕಪ್ ಟ್ರಕ್, ಕಣಿವೆಗೆ ಉರುಳಿದ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ಮೃತಪಟ್ಟಿರುವ ಘಟನೆ ಪೂರ್ವ ಮಿಜೋರಾಂನ ಖಜವಾಲ್ ಜಿಲ್ಲೆಯಲ್ಲಿ ನಡೆದಿದೆ. 11 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ 9.30ರ ಸುಮಾರಿಗೆ ಅಂತ್ಯಸಂಸ್ಕಾರಕ್ಕೆಂದು ಟ್ರಕ್‌ನಲ್ಲಿ ರಬಂಗ್ ಹಳ್ಳಿ ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲಾಲ್‌ಚುಂಗ್ಲುರಾ ಹೇಳಿದ್ದಾರೆ.

19 ಜನರನ್ನು ಹೊತ್ತು ಸಾಗುತ್ತಿದ್ದ ವಾಹನದ ಬ್ರೇಕ್ ಫೇಲ್ ಆಗಿದ್ದು, ಅಪಘಾತಕ್ಕೆ ಕಾರಣವಿರಬಹುದು ಎಂದು ಅವರು ಹೇಳಿದ್ದಾರೆ.

ADVERTISEMENT

ಅಪಘಾತದ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ರಬಂಗ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಸುನೀಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.