ADVERTISEMENT

ದೆಹಲಿ | ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: ಐವರು ಸಾವು, ಮೂವರಿಗೆ ಗಾಯ

ಪಿಟಿಐ
Published 21 ಅಕ್ಟೋಬರ್ 2023, 7:26 IST
Last Updated 21 ಅಕ್ಟೋಬರ್ 2023, 7:26 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ನೊಯಿಡಾ: ದೆಹಲಿಯ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಮಾರುತಿ ಇಕೊ ವ್ಯಾನ್‌ ಹಾಗೂ ಅಪರಿಚಿತ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಒಂದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಬುಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಯಮುನಾ ಎಕ್ಸ್‌ಪ್ರೆಸ್‌ವೇನ 25ನೇ ಮೈಲಿಗಲ್ಲು ಬಳಿ ಮಧ್ಯರಾತ್ರಿ 1ರ ಸುಮಾರಿಗೆ ಅಪಘಾತವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

8 ಜನರಿದ್ದ ಇಕೊ ವ್ಯಾನ್‌ಗೆ ಅಪರಿಚಿತ ವಾಹನ ದಿಕ್ಕಿಯಾಗಿದೆ. ಈ ವೇಳೆ ಐವರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.