ಇಂಫಾಲ್: ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರನ್ನು ಮಣಿಪುರದ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಬಂಧಿಸಲಾಗಿದೆ.
ಈ ಎಲ್ಲರೂ ಸುಲಿಗೆಯಲ್ಲಿ ಭಾಗಿಯಾಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲೆಯ ಮೈತೇಯಿ ಪ್ರಾಬಲ್ಯದ ಲಮ್ಖೈ ಚಾಜಿಂಗ್ ಪ್ರದೇಶದಲ್ಲಿ ಪೀಪಲ್ಸ್ ಲಿಬರೇಷನ್ ಆರ್ಮಿಯ ಸಕ್ರಿಯ ಸದಸ್ಯನನ್ನು ಬಂಧಿಸಲಾಗಿದೆ. ಈತ ಜಿರಿಬಾಮ್ ಜಿಲ್ಲೆಯವನು ಎಂದು ಹೇಳಿದ್ದಾರೆ.
ಕಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ಪಿಡಬ್ಲ್ಯುಜಿ) ಮಹಿಳಾ ಸದಸ್ಯೆಯೊಬ್ಬರನ್ನು, ಕೆಸಿಪಿಯ (ಪಿಡಬ್ಲ್ಯುಜಿ) ಮೂವರು ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಹರಣ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲೇ ನಾಲ್ವರನ್ನು ಬಂಧಿಸಿದ್ದು, ಇವರಿಂದ ಶಸ್ತ್ರಾಸ್ತ್ರ– ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಣಿಪುರದಲ್ಲಿ ಆರೋಪಿಗಳ ಪತ್ತೆಗೆ ಶೋಧ ಬಿರುಸುಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.